Home Search Results NGO Cancer Awareness Drive at Byndoor with NG World Charitable Trust
1 year ago
472 Views
Cancer Awareness Drive at Byndoor with NG World Charitable Trust
NGO

Cancer Awareness Programme

Date : Jan 2025

Location : Byndoor

ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆ  ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ :  ಫೆ. 4 ವಿಶ್ವ ಕ್ಯಾನ್ಸರ್ ದಿನ. ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಅಂತೆಯೇ  ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ  ಕಾರಿತಾಸ್ ಇಂಡಿಯಾ ನವದೆಹಲಿ, ಸಂಪದ ಉಡುಪಿ, ಜೇಸಿಐ ಬೈಂದೂರು ಸಿಟಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇವುಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನವು ಬೈಂದೂರು ಪೇಟೆಯಲ್ಲಿ ಫೆ. 4 ರಂದು ಆಯೋಜಿಸಲಾಯಿತು. ಬೈಂದೂರು ಸಿಟಿಯ ಜೇಸಿಐ ಅಧ್ಯಕ್ಷರಾದ ರಾಜು ಕೆ. ಮೊಗವೀರರವರು ಕ್ಯಾನ್ಸರ್ ರೋಗದ ಬಗ್ಗೆ ತಯಾರಿಸಿದ ಕರಪತ್ರವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

 

 ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ಸಮಗ್ರವಾಗಿ ವಿವರಿಸಿದರು. ಬೈಂದೂರು ಸಮುದಾಯ  ಆರೋಗ್ಯ ಕೇಂದ್ರದ  ವೈದ್ಯಾಧಿಕಾರಿಯಾದ  ಡಾ. ರಾಜೇಶ್ ರವರು ಕ್ಯಾನ್ಸರ್  ರೋಗದ ಬಗ್ಗೆ ಮಾಹಿತಿ ನೀಡಿದರು. ಕಲ್ಮಕ್ಕಿ ಸಂತ ಸೆಬಾಸ್ಟಿಯನ್ ಚರ್ಚಿನ ಸಹಾಯಕ ಧರ್ಮಗುರುಗಳಾದ ಫಾ. ಮ್ಯಾಥ್ಯೂ ಮನಪ್ಪಾಟ್ ಹಾಗೂ ಉಡುಪಿ ಸಂಪದ ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ಸಿಂಥಿಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

  

ಸುನಿಲ್  ರವರು ಎಲ್ಲರನ್ನು ಸ್ವಾಗತಿಸಿ, ಉಡುಪಿ ಸಂಪದ ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ಸಿಂಥಿಯಾ ಧನ್ಯವಾದವಿತ್ತರು. ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಬೈಂದೂರು ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ, ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಬಗ್ಗೆ ಕರಪತ್ರ ಹಂಚಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಸ್ವ ಸಹಾಯ ಸಂಘಗಳ ಮಹಿಳೆಯರು, ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ವಿವಿಧ ಸಂಘಟನೆಗಳು ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

So if you want to  Join  Us or Support  our upcoming projects please join us

 HDFC A/C Number: 50200081498878

IFSC: HDFC0009008,

Branch: Belthangady ,

Account Type: current 

Google Pay/ Phone Pay

+91 9483842770

 

948 * * * * * * * * *
Add to favorites
Add to compare
Report abuse
NG, 1st floor, Manar Mansion Building, Hampankatta, Mangalore
Follow our social media
© 2025 NG WORLD. All rights reserved.