Home Search Results NGO Cancer Awareness Programme at Bellare Sullia: ಏನ್ ಜಿ ವಲ್ಡ್ ಟ್ರಸ್ಟ್ ಸಹಯೋಗದಲ್ಲಿ ಹಾಗೂ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ
2 years ago
540 Views
Cancer Awareness Programme at Bellare Sullia: ಏನ್ ಜಿ ವಲ್ಡ್ ಟ್ರಸ್ಟ್ ಸಹಯೋಗದಲ್ಲಿ ಹಾಗೂ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ
NGO

Pro. 19 Cancer Awareness Programme at Bellare, Sullia: ಏನ್ ಜಿ ವಲ್ಡ್ ಟ್ರಸ್ಟ್ ಸಹಯೋಗದಲ್ಲಿ ಹಾಗೂ .ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

ಪ್ರಸ್ತುತ ಜಗತ್ತಿನಲ್ಲಿ ಕ್ಯಾನ್ಸರ್ ರೋಗವು ಮಾರಕ ರೋಗವಾಗಿ ಪರಿಣಮಿಸಿದೆ. ಕ್ಯಾನ್ಸರ್ ರೋಗದ ಬಗ್ಗೆ ನಿರ್ಲಕ್ಷ್ಯ ಸಲ್ಲದು. ನಮ್ಮ ಆರೋಗ್ಯ ಹದೆಗೆಟ್ಟಾಗ ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ.  ಆತ್ಮವಿಶ್ವಾಸ, ಸಕಾರಾತ್ಮಕ ಆಲೋಚನೆ, ವ್ಯಾಯಾಮ ಹಾಗೂ ಪೌಷ್ಟಿಕ ಆಹಾರ ಸೇವನೆ ಮಾಡಿದಾಗ ಕ್ಯಾನ್ಸರ್ ಗೆಲ್ಲಬಹುದು ಎಂದು  ಜನರಲ್ ಮತ್ತು ಲ್ಯಾಪರೋಸ್ಕೋಪಿಕ್ ಸರ್ಜನ್ ಹಾಗೂ ಮಂಗಳೂರು ಎ.ಜೆ. ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕರಾದ  ಡಾ. ಕಿಶನ್ ರಾವ್ ಬಾಳಿಲ ಅಭಿಪ್ರಾಯಪಟ್ಟರು. ಅವರು ಜನವರಿ 23 ರಂದು ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಗ್ರಾಮ ಪಂಚಾಯತ್ ಬೆಳ್ಳಾರೆ, ಸಮುದಾಯ ಆರೋಗ್ಯ ಕೇಂದ್ರ ಬೆಳ್ಳಾರೆ, ಡಾ. ಕೆ. ಶಿವರಾಮ್ ಕಾರಂತ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಹಾಗೂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಇವುಗಳ ಆಶ್ರಯದಲ್ಲಿ ಬೆಳ್ಳಾರೆ ಪೇಟೆಯಲ್ಲಿ ನಡೆದ ಕ್ಯಾನ್ಸರ್ ರೋಗದ ವಿರುದ್ಧದ ಬೃಹತ್ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಮಾತನಾಡಿದರು. 

 

ಡಾ. ಕೆ. ಶಿವರಾಮ್ ಕಾರಂತ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಅರ್ಚನಾ ಕ್ಯಾನ್ಸರ್ ರೋಗದ ಬಗ್ಗೆ ತಯಾರಿಸಿದ ಕರಪತ್ರವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರಾದ ಶ್ರೀಮತಿ ಸುಶೀಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಡಿ.ಕೆ.ಆರ್.ಡಿ.ಎಸ್  ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ಸಮಗ್ರವಾಗಿ ವಿವರಿಸಿದರು. 

 

 ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಾಯಕ ಸಂಯೋಜಕರಾದ ರಾಜೇಶ್ ಪಿ. ಎಲ್ಲರನ್ನು ಸ್ವಾಗತಿಸಿ, ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಎಲ್ಲರಿಗೂ  ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಬೆಳ್ಳಾರೆ ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ, ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಬಗ್ಗೆ ಕರಪತ್ರ ಹಂಚಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗ, ಬೆಳ್ಳಾರೆ ಡಾ.ಕೆ. ಶಿವರಾಮ್ ಕಾರಂತ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದ, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಡಿ.ಕೆ.ಆರ್.ಡಿ.ಎಸ್  ಸಂಸ್ಥೆಯ ಸ್ವ ಸಹಾಯ ಸಂಘಗಳ ಮಹಿಳೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 

948 * * * * * * * * *
Add to favorites
Add to compare
Report abuse
NG, 1st floor, Manar Mansion Building, Hampankatta, Mangalore
Follow our social media
© 2025 NG WORLD. All rights reserved.